Wednesday, January 22, 2025

ಸಿದ್ದರಾಮಯ್ಯರನ್ನ ಟೀಕಿಸುವ ನೈತಿಕತೆ ಬಿಜೆಪಿಗಿಲ್ಲ: ಸಚಿವ ಈಶ್ವರ್ ಖಂಡ್ರೆ

ಮೈಸೂರು: ಅಯೋಧ್ಯೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯರನ್ನ ಟೀಕಿಸುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಾನು ಆಸ್ತಿಕ ನಾಸ್ತಿಕ ಅಲ್ಲ ಅಂತ ಅವರೇ ಹೇಳಿದ್ದಾರೆ. ಅವರು ನಾಸ್ತಿಕರಾಗಿದ್ದರೆ ಅವರ ಕ್ಷೇತ್ರದಲ್ಲಿ ರಾಮಮಂದಿರ ಕಟ್ಟುತ್ತೀರಲಿಲ್ಲ. ದೇವಸ್ಥಾನಗಳಿಗೆ ಅನುದಾನ ನೀಡುತ್ತಿರಲಿಲ್ಲ ಎಂದರು.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಪತಿ ಎದುರಿಗೆ ಪತ್ನಿ ಆತ್ಮಹತ್ಯೆ

ರಾಜ್ಯದ ಅನೇಕ ದೇವಾಲಯಗಳಿಗೆ ಸಿದ್ದರಾಮಯ್ಯ ಅನುದಾನ ನೀಡಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ರಾಮ ನಮ್ಮ ಮನಸ್ಸಿನಲ್ಲಿದ್ದಾನೆ ಎಂದರು.

 

RELATED ARTICLES

Related Articles

TRENDING ARTICLES