Monday, December 23, 2024

ಶ್ರೀರಾಮ ಅವರಪ್ಪನ ಮನೆ ಆಸ್ತಿನಾ..? : ಡಿ.ಕೆ. ಶಿವಕುಮಾರ್ ಕಿಡಿ

ಬೆಂಗಳೂರು : ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ..? ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಕೆರಳಿ ಕೆಂಡವಾದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮ ಇದ್ದಾನೆ. ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ನನ್ನ ಹೆಸರಲ್ಲಿ ಶಿವನ ಮಗ ಕುಮಾರನೂ ಇದ್ದಾನೆ ವಾಗ್ದಾಳಿ ನಡೆಸಿದರು.

ಬಿಜೆಪಿಯವರಿಗೆ ಹೊಟ್ಟೆ ಉರಿ. ಏನಾದ್ರೂ ಮಾಡಿ ನಮ್ಮನ್ನ ಹಿಂದೂ ವಿರೋಧಿಗಳು ಅಂತಾ ಬಿಂಬಿಸಲು ಮಾಡ್ತಿದ್ದಾರೆ. ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಪೂಜೆಗೆ ಆದೇಶ ಮಾಡಿಲ್ವಾ? ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ಮಾಡಿ, ಪೂಜೆ ಮಾಡಲು ನಮ್ಮ ಸರ್ಕಾರ ಹೇಳಿದೆ ಎಂದು ಕಿಡಿಕಾರಿದರು.

ಮಹಾತ್ಮ ಗಾಂಧೀಜಿ ಹೇಳಿಲ್ವಾ..?

ಮಹಾತ್ಮ ಗಾಂಧೀಜಿ ಹೇಳಿಲ್ವಾ..? ರಘುಪತಿ ರಾಘವ ರಾಜಾರಾಮ್, ಪತೀತ ಪಾವನ ಸೀತಾರಾಮ್ ಅಂತಾ.. ನಾವು ರಾಮನನ್ನೂ ಪೂಜಿಸ್ತೀವಿ.. ಸೀತೆಯನ್ನೂ ಪೂಜಿಸ್ತೀವಿ ಎಂದು ಬಿಜೆಪಿಗರ ವಿರುದ್ಧ ಡಿಕೆಶಿ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES