Monday, December 23, 2024

ರಾಮಮಂದಿರ ಉದ್ಘಾಟನೆ: ಜೈ ಶ್ರೀರಾಮ್ ಎಂದು ಶುಭಾಶಯ ತಿಳಿಸಿದ ಡೇವಿಡ್ ವಾರ್ನರ್

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಶುಭ ಸಮಾರಂಭದ ಬಳಿಕ ಆಸ್ಟ್ರೇಲಿಯಾದ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್ ಶುಭಾಶಯಗಳನ್ನು ತಿಳಿಸಿರುವುದು ವಿಶೇಷ.

ವಿಶ್ವದ ಪ್ರಸಿದ್ಧ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ವಾರ್ನರ್ ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ತಮ್ಮ ಅಭಿನಂದನಾ ಸಂದೇಶವನ್ನು ತಿಳಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶ್ರೀರಾಮಚಂದ್ರನ ಆಗಮನದ ಫೋಟೋವೊಂದನ್ನು ಹಂಚಿಕೊಂಡಿರುವ ವಾರ್ನರ್, ಜೈ ಶ್ರೀರಾಮ್ ಇಂಡಿಯಾ ಎಂದು ಬರೆದುಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಅವರ ಈ ಪೋಸ್ಟ್​ಗೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬರುತ್ತಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಅನಂತಕುಮಾರ್​ ಹೆಗ್ಡೆ ಅನರ್ಹರು: ಟಿಕೇಟ್ ನೀಡದಂತೆ ಮನವಿ!

ಜ.22 ರಂದು ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ಮೋದಿ ಶ್ರದ್ದಾ ಭಕ್ತಿಯಿಂದ ನೆರವೇರಿಸಿದ್ದರು, ಇದೀಗ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಆಸ್ಟ್ರೇಲಿಯಾ ಕ್ರಿಕೆಟರ್ ಡೇವಿಡ್ ವಾರ್ನರ್​ ಜೈಶ್ರೀರಾಮ್​ ಎಂದು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by David Warner (@davidwarner31)

RELATED ARTICLES

Related Articles

TRENDING ARTICLES