Monday, December 23, 2024

PSI ಮರುಪರೀಕ್ಷೆಯಲ್ಲಿ ಅಕ್ರಮ ಮತ್ತೆ ಮರುಕಳಿಸಬಾರದು: ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ಇಂದು ನಡೆಉತ್ತಿರುವ PSI ಮರುಪರೀಕ್ಷೆಯಲ್ಲಿ ಅಕ್ರಮ ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಇಂದು ರಾಜ್ಯದಲ್ಲಿ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್ಐ) ನೇಮಕಾತಿ ಮರುಪರೀಕ್ಷೆ ನಡೆಯುತ್ತಿದೆ. ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಕಲ ಸಿದ್ಧತೆ ಮಾಡಿಕೊಂಡಿದೆ. 54 ಸಾವಿರ ಅಭ್ಯರ್ಥಿಗಳು ಮರುಪರೀಕ್ಷೆ ಬರೆಯುತ್ತಿದ್ದಾರೆ. ನನಗೆ ವಿಶ್ವಾಸ ಇದೆ ಯಾವುದೇ ಅಹಿತಕರ ಘಟನೆ ನಡೆಯಲ್ಲ ಎಂಬ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯವರಿಗೆ ವರದಿ ಕಳಿಸಲಾಗಿದೆ.

ಪರೀಕ್ಷೆಗೂ ಸಬ್‌ ಇನ್ಸ್‌ಪೆಕ್ಟರ್‌ ಆಡಿಯೋಗೂ ಯಾವುದೇ ಸಂಬಂಧವೇ ಇಲ್ಲ. ಅವರೇ ಒಂದು ಹೇಳಿಕೆ ಕೊಟ್ಟಿದ್ದಾರೆ. ಯಾರಾದ್ರೂ ಅಕ್ರಮ ಮಾಡ್ತಾ ಇದ್ದಾರೆ ಅನ್ನೋ ಕಾರಣಕ್ಕೆ ಹೀಗೆ ಹೇಳಿದ್ದೆ ಎಂದಿದ್ದಾರಂತೆ ಅದು ನಿಜವೋ ಸುಳ್ಳೋ ಅನ್ನೋದನ್ನ ತನಿಖೆ ಮಾಡ್ತಾ ಇದ್ದಾರೆ ಎಂದರು.

 

RELATED ARTICLES

Related Articles

TRENDING ARTICLES