Wednesday, November 20, 2024

ಅರ್ಚಕ ಹಿರೇಮಗಳೂರು ಕಣ್ಣನ್ ವೇತನ ವಾಪಸ್ ಕೇಳಿ ನೋಟಿಸ್ ನೀಡಿದ ಅಧಿಕಾರಿಗಳು!

ಚಿಕ್ಕಮಗಳೂರು : ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ವಾಪಾಸ್​ ಕೇಳಿ ತಹಶಿಲ್ದಾರ್ ನೋಟಿಸ್ ನೀಡಿದ್ದಾರೆ. ಅಲ್ಲದೇ, ಸದ್ಯ ವೇತನವನ್ನು ತಡೆಹಿಡಿಯಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ರಾಮನ ದರ್ಶನಕ್ಕೆ ಭಕ್ತರ ನೂಕುನುಗ್ಗಲು: ದೇವಾಲಯದ ಬಾಗಿಲು ತಾತ್ಕಾಲಿಕ ಬಂದ್!

ಕನ್ನಡದ ಪಂಡಿತ, ಕನ್ನಡ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರು ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರ ವಲಯದಲ್ಲಿರುವ ಕಲ್ಯಾಣ ಕೋದಂಡರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ‌ ಇದೆ ಅಂತ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು 2023ರ ಡಿಸೆಂಬರ್​ 2ರಂದು  ತಹಶಿಲ್ದಾರ್ ಸುಮಂತ್ ನೋಟಿಸ್​ ನೀಡಿದ್ದಾರೆ.

ಒಂದಡೆ ರಾಜ್ಯ ಕಾಂಗ್ರೆಸ್ ನಾಯಕರು​ ಹಿಂದಿ ಹೇರಿಕೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಆದರೆ ಇತ್ತ  ಕನ್ನಡದಲ್ಲೇ ಮಂತ್ರಗಳನ್ನು ಹೇಳುತ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬರುವಂತೆ ಮಾಡಿರುವ ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್​ ಅವರಿಗೆ ರಾಜ್ಯ ಕಾಂಗ್ರೆಸ್​ ಸರ್ಕಾರ ನೋಟಿಸ್​ ನೀಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

RELATED ARTICLES

Related Articles

TRENDING ARTICLES