ಬೆಂಗಳೂರು: ಇಂದು ಪಿಎಸ್ಐ ಮರು ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಕಳೆದ ಬಾರಿ ಪಿಎಸ್‌ಐ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದ್ದರಿಂದ ಈ ಬಾರಿ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲುಬಿಗಿ ಭದ್ರತೆ ಏರ್ಪಡಿಸಲು ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ.
ಇದನ್ನೂ ಓದಿ: ಪ್ರಧಾನಮಂತ್ರಿ ‘ಸೂರ್ಯೋದಯ ಯೋಜನೆ’ ಘೋಷಿಸಿದ ಕೇಂದ್ರ
ಇಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಪರೀಕ್ಷೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ 6 ಮಂದಿಯನ್ನು ನಿಯೋಜಿಸಲಾಗಿದೆ. ಒಟ್ಟಾರೆಯಾಗಿ 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. 54 ಸಾವಿರ ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಬರೆಯುತ್ತಿದ್ದು. ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಬೇರಾವ ಭಾಗದಲ್ಲೂ ಈ ಪರೀಕ್ಷಾ ಕೇಂದ್ರಗಳು ಇಲ್ಲ.