Monday, December 23, 2024

ಐಸಿಸಿ ಏಕದಿನ ತಂಡದಲ್ಲಿ ಭಾರತದ 6 ಆಟಗಾರರಿಗೆ ಸ್ಥಾನ

ಬೆಂಗಳೂರು : 2023ರ ಅತ್ಯುತ್ತಮ ಏಕದಿನ ತಂಡವನ್ನು ಐಸಿಸಿ ಪ್ರಕಟಿಸಿದ್ದು, ಭಾರತದ 6 ಆಟಗಾರರು ಸ್ಥಾನ ಪಡೆಯುವ ಮೂಲಕ ಪಾರಮ್ಯ ಮೆರೆದಿದ್ದಾರೆ.

ರೋಹಿತ್ ಶರ್ಮಾ ಏಕದಿನ ತಂಡಕ್ಕೆ ನಾಯಕರಾಗಿದ್ದು, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಕುಲ್​ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.

ಹೀಗಿದೆ ಏಕದಿನ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಟ್ರಾವಿಸ್ ಹೆಡ್, ವಿರಾಟ್ ಕೊಹ್ಲಿ, ಡೇರಿಲ್ ಮಿಚೆಲ್, ಹೆನ್ರಿಕ್ ಕ್ಲಾಸೆನ್, ಮಾರ್ಕೊ ಯಾನ್ಸೆನ್, ಆಡಂ ಝಂಪಾ, ಮೊಹಮ್ಮದ್ ಸಿರಾಜ್, ಕುಲ್​ದೀಪ್ ಯಾದವ್, ಮೊಹಮ್ಮದ್ ಶಮಿ.

ಟಿ-20 ತಂಡದಲ್ಲಿ ನಾಲ್ವರಿಗೆ ಸ್ಥಾನ

ಐಸಿಸಿಯು ವರ್ಷದ ಟಿ-20 ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ನಾಯಕತ್ವ ಪಟ್ಟ ನೀಡಲಾಗಿದೆ.

ಹೀಗಿದೆ ಟಿ-20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಫಿಲ್ ಸಾಲ್ಟ್, ನಿಕೋಲಸ್ ಪುರನ್, ಮಾರ್ಕ್ ಚಾಪ್ಮನ್, ಸಿಕಂದರ್ ರಾಸ್, ಅಲ್ಪೇಶ್ ರಾಮ್ಜಾನಿ, ಮಾರ್ಕ್ ಅದೈರ್, ರವಿ ಬಿಷ್ಣೋಯ್, ರಿಚರ್ಡ್ ನಾಗರಾವ, ಅರ್ಷದೀಪ್ ಸಿಂಗ್.

RELATED ARTICLES

Related Articles

TRENDING ARTICLES