ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಉಪವಾಸ ಮಾಡಿದ್ದೇ ಅನುಮಾನ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅನುಮಾನ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಾಲ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಮೋದಿ ಉಪವಾಸ ಮಾಡಿಲ್ಲ ಎಂದು ಕುಟುಕಿದರು.
ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ. 11 ದಿನಗಳ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ. ವೈದ್ಯರ ಅಭಿಪ್ರಾಯದ ಪ್ರಕಾರ ಅದು ಅಸಾಧ್ಯ. ಉಪವಾಸ ಅಂತ ಹೇಳಿ ಪ್ರಾಧನಿ ಮೋದಿ ಬಹಳ ಜೋರಾಗಿ ಒಡಾಡಿದ್ರು. ಉಪವಾಸ ಇದ್ದ ಹಾಗೆ ನರೇಂದ್ರ ಮೋದಿ ಕಾಣಲಿಲ್ಲ ಎಂದು ಚಾಟಿ ಬೀಸಿದರು.
ಮೋದಿ ರಾಜಧರ್ಮ ಪಾಲನೆ ಮಾಡಲಿಲ್ಲ
ದೇವರಿಗೆ ಇಚ್ಛೆ ಪ್ರಕಾರ ಏನು ಬೇಕಾದರೂ ಮಾಡಲಿ. ಆದರೆ, ಇವರ ನಾಟಕ ಇನ್ನುಮುಂದೆ ನಡೆಯಲ್ಲ. ಗುಜರಾತ್ ಹತ್ಯಾಕಾಂಡದ ವೇಳೆ ಮೋದಿ ರಾಜಧರ್ಮ ಪಾಲನೆ ಮಾಡಲಿಲ್ಲ. ಕಾನೂನು ಪರಿಪಾಲನೆ ಮಾಡಲಿಲ್ಲ. ರಾಜಧರ್ಮ ಪಾಲನೆ ಮಾಡದೆ ಶ್ರೀರಾಮನ ಗರ್ಭಗುಡಿಯಲ್ಲಿ ಕೂತು ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ವಿಪರ್ಯಾಸ ಎಂದು ವೀರಪ್ಪ ಮೊಯ್ಲಿ ಹೇಳಿದರು.