ಬೆಂಗಳೂರು ಗ್ರಾಮಾಂತರ : ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಸಂವಿಧಾನ ಕುರಿತು ಸ್ಥಬ್ದಚಿತ್ರದ ಟ್ಯಾಬ್ಲೋ ಸಂಚಾರಕ್ಕೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಹಾಗು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಸೂಚಿಸಿದರು.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 75ನೇ ಗಣರಾಜ್ಯೋತ್ಸವ ಹಿನ್ನೆಲೆ ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ನಡೆಸಲು, ಸಂವಿಧಾನದ ಕುರಿತು ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಲುಪಿಸಲು ಚಿಂತನೆ ನಡೆಸಿರುವ ಹಿನ್ನಲೆಯಲ್ಲಿ ಜಿಲ್ಲೆಯ 101 ಪಂಚಾಯತಿಗಳಲ್ಲಿ ಸಂವಿಧಾನ ಕುರಿತ ಸಾಕ್ಷ್ಯ ಚಿತ್ರದ ಮೂಲಕ ಸಾರ್ವಜನಿಕರಿಗೆ ತಳಿಸಲು ತಯಾರಿ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಇದನ್ನೂ ಓದಿ: INDIA ಗೆ ಕೈಕೊಟ್ಟ ಮಮತಾ ಬ್ಯಾನರ್ಜಿ: ಪಶ್ಚಿಮ ಬಂಗಾಳದಲ್ಲಿ TMC ಏಕಾಂಗಿ ಸ್ಪರ್ಧೆ!
ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಮುಖಂಡರು ಹಾಗೂ ಎಲ್ಲಾ ಸಾರ್ವಜನಿಕರು ಭಾಗವಹಿಸಿ ಆಚರಣೆಮಾಡಲು ತಯಾರಗಬೇಕೆಂದರು.
ಈ ಜಾಥ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 16 ಸದಸ್ಯರ ಸಮಿತಿಯ ರಚನೆಯ ಮೂಲಕ ಇದರ ಉಸ್ತುವಾರಿಯನ್ನು ಜಿಲ್ಲಾಡಳಿತ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ವಹಿಸಿ ಯಶಸ್ವಿಯಾಗಿ ನಡೆಸಲು ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ನಾವು ಸಿದ್ದರಿದ್ದು ಯಾವುದೇ ಕ್ಷಣದಲ್ಲಿ ಬೇಕಾದರು ನಾವು ಹಣವನ್ನು ಬಿಡುಗಡೆ ಮಾಡಲು ಸಿದ್ದರಿದ್ದೀವಿ ಎಂದು ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಸಭೆಯಲ್ಲಿ ತಳಿಸಿದರು.
ಈ ವೇಳೆ ಸಿಇಒ ಡಾ.ಅನುರಾಧ, ಉಪ ಕಾರ್ಯದರ್ಶಿ ರಮೇಶ್ , ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮ, ದಲಿತ ಮುಖಂಡರು ಉಪಸ್ಥಿತರಿದ್ದರು.