Wednesday, January 22, 2025

ರಾಶಿ ಭವಿಷ್ಯ: ಹಣಕಾಸಿನ ವಿಷಯದಲ್ಲಿ ಈ ರಾಶಿಯವರಿಗೆ ಒಳಿತಾಗಲಿದೆ!

ವಾರದ ಮೂರನೇ ದಿನ ಬುಧವಾರ, ಇಂದಿನ ರಾಶಿ ಭವಿಷ್ಯದಲ್ಲಿ ಯಾವ ರಾಶಿಯವರಿಗೆ ಶುಭ ಹಾಗು ಯಾವ ರಾಶಿಯವರಿಗೆ ಅಶುಭ? ಯಾವ ರಾಶಿಯವರು ಈ ದಿನ ಏನು ಮಾಡಿದರೇ ಒಳಿತು ಹಾಗು ಯಾವ ದೇವರ ಪ್ರಾರ್ಥನೆಯನ್ನು ಮಾಡಿದರೇ ಒಳಿತಾಗಲಿದೆ ಎಂಬುದನ್ನು ಈ ವರದಿಯಲ್ಲಿ ನೋಡೋಣ.

ಮೇಷ: ಆರೋಗ್ಯದ ಕುರಿತು ಕಾಳಜಿ ವಹಿಸಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ಹೊಸ ಆಲೋಚನೆಗಳನ್ನು ಮಾಡುವಿರಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ವೃಷಭ: ಕುಟುಂಬ ಸದಸ್ಯರ ಬೆಂಬಲವು ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ.

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದೆ, ತಾಳ್ಮೆಯಿಂದ ಸಹಕರಿಸಿ.ಕೌಟುಂಬಿಕವಾಗಿ ಶುಭ ಫಲ.

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ.

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ನಿಮ್ಮ ಆತುರದ ಮಾತುಗಳಿಂದ ನೋವು ಆಗಬಹುದು. ನಿಧಾನಿಸಿ, ಯೋಚಿಸಿ ಮಾತನಾಡಿ.ಕೌಟುಂಬಿಕವಾಗಿ ಮಿಶ್ರ ಫಲ.

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿ ಇರಿಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಇರಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ

RELATED ARTICLES

Related Articles

TRENDING ARTICLES