Wednesday, January 22, 2025

I.N.D.I.A. ಛಿದ್ರ ಖಚಿತ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಯಿಂದ ಹೊರಗೆ ಬಂದಿದ್ದಾರೆ. ಶರತ್ ಪವಾರ್ ಕೂಡ ಹೊರ ಬರಲಿದ್ದಾರೆ. ಬಿಹಾರ ಸಿಎಂ ನಿತಿಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ‌. ಇಂಡಿ ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ‌. ಕಾಂಗ್ರೆಸ್ ನವರ ಕಟಾದಿಂದ ಅವರು ಹೊರಗೆ ಬರುತ್ತಿದ್ದಾರೆ.

ಮೊದಿಯವರು 3ನೇ ಬಾರಿಗೆ ಪ್ರಧಾನಿಯಾದ ಮೇಲೆ ಒಕ್ಕೂಟ ಇರುವುದಿಲ್ಲ. ಮಮತಾ ಬ್ಯಾನರ್ಜಿಯವರಿಗೆ ಭ್ರಮ‌ನಿರಸನ ಆಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ವರ್ತನೆಯಿಂದ ಬೇಸತ್ತು ಇಂಡಿ ಒಕ್ಕೂಟದ ಪಕ್ಷಗಳು ದೂರವಾಗುತ್ತಿದೆ ಎಂದರು.

 

 

RELATED ARTICLES

Related Articles

TRENDING ARTICLES