ಬೆಂಗಳೂರು : ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳ ಸರಣಿಯು ನಾಳೆಯಿಂದ ಪ್ರಾರಂಭವಾಗಲಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ.
ಈಗಾಗಲೇ ಭಾರತದ ಆಟಗಾರರು ಭರ್ಜರಿ ಅಭ್ಯಾಸ ನಡೆಸಿದ್ದಾರೆ. ಮತ್ತೊಂದೆಡೆ ಇಂಗ್ಲೆಂಡ್ ವಿಭಿನ್ನ ತಂತ್ರಗಳನ್ನು ಪ್ರಯೋಗಿಸಲು ಮುಂದಾಗಿದೆ. ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಲು ಬೆನ್ ಸ್ಟೋಕ್ಸ್ ಬಳಗ ಕಾಯುತ್ತಿದೆ. ಇತ್ತ, ಅಜೇಯ ದಾಖಲೆ ಮುಂದುವರಿಸಲು ರೋಹಿತ್ ಶರ್ಮಾ ಪಡೆ ಪ್ಲಾನ್ ಮಾಡಿದೆ.
ರನ್ ಮೆಷಿನ್ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ, ನಾಯಕ ರೋಹಿತ್ ಶರ್ಮಾ ಅವರ ಮೇಲೆ ಬ್ಯಾಟಿಂಗ್ ಹೊರೆ ಬೀಳಲಿದೆ. ಇನ್ನೂ ಇಂಗ್ಲೆಂಡ್ ವಿರುದ್ಧ ಹಿಟ್ಮ್ಯಾನ್ ಶರ್ಮಾ ಅತ್ಯುತ್ತಮ ದಾಖಲೆ ಹೊಂದಿದ್ದಾರೆ.
ಆಂಗ್ಲರ ವಿರುದ್ಧ ರೋಹಿತ್ ಘರ್ಜನೆ
ಇಂಗ್ಲೆಂಡ್ ವಿರುದ್ಧ ಆಡಿರುವ 17 ಇನ್ನಿಂಗ್ಸ್ಗಳಲ್ಲಿ ರೋಹಿತ್ 747 ರನ್ ಸಿಡಿಸಿದ್ದಾರೆ. ಗರಿಷ್ಠ ಸ್ಕೋರ್ 161 ಆಗಿದ್ದು, 49.80 ಸರಾಸರಿಯಲ್ಲಿ ಎರಡು ಶತಕ ಹಾಗೂ ಮೂರು ಅರ್ಧಶತಕ ರೋಹಿತ್ ಬ್ಯಾಟ್ನಿಂದ ಸಿಡಿದಿವೆ.
ಭಾರತ ತಂಡ
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿ.ಕೀ.), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಶ್ರೀಕರ್ ಭರತ್, ಧ್ರುವ ಜುರೆಲ್, ಅವೇಶ್ ಖಾನ್ , ಕುಲದೀಪ್ ಯಾದವ್, ಅಕ್ಸರ್ ಪಟೇಲ್
ಇಂಗ್ಲೆಂಡ್ ತಂಡ
ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್(ವಿ.ಕೀ.), ಮಾರ್ಕ್ ವುಡ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್, ಗುಸ್ ಅಟ್ಕಿನ್ಸನ್, ಟಾಮ್ ಹಾರ್ಟ್ಲಿ , ರೆಹಾನ್ ಅಹಮದ್