Sunday, December 22, 2024

ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತಿ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತರಾಗಿದ್ದಾರೆ.

2007ರಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಇವರು 2023ರ ಜುಲೈನಲ್ಲಿಯೇ ಅವರ ಸೇವಾವಧಿ ಮುಕ್ತಾಯಗೊಂಡಿತ್ತು. ಆಸ್ಪತ್ರೆಯ ಸಿಬ್ಬಂದಿ ಮತ್ತು ಹಲವಾರು ಗಣ್ಯರು ಅವರ ಸೇವೆ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರು.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ. ಸಿ. ಎನ್. ಮಂಜುನಾಥ್ ಅವರ ಸೇವೆಯನ್ನು 2024ರ ಜನವರಿ ತನಕ ವಿಸ್ತರಣೆ ಮಾಡಲು ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಈಗ ಅವಧಿ ಮುಕ್ತಾಯಗೊಂಡಿದ್ದು, ನಿವೃತ್ತರಾಗಿದ್ದಾರೆ.

ಆಸ್ಪತ್ರೆಯನ್ನು ಕಟ್ಟಿ ಬೆಳೆಸುವಲ್ಲಿ ಅಪಾರವಾದ ಶ್ರಮ

ಜಯದೇವ ಆಸ್ಪತ್ರೆಯನ್ನು ಕಟ್ಟಿ ಬೆಳೆಸುವಲ್ಲಿ ಡಾ. ಸಿ. ಎನ್. ಮಂಜುನಾಥ್ ಅವರ ಅಪಾರವಾದ ಶ್ರಮವಿದೆ. ಮೈಸೂರು ನಗರದಲ್ಲಿ ಜಯದೇವ ಆಸ್ಪತ್ರೆಯ ಶಾಖೆಯನ್ನು ನಿರ್ಮಾಣ ಮಾಡಿ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಕಲಬುರಗಿಯಲ್ಲಿಯೂ ಮಂಜುನಾಥ್ ಅವರ ಉಸ್ತುವಾರಿಯಲ್ಲಿ 371 ಹಾಸಿಗೆ ಸಾಮರ್ಥ್ಯದ ಜಯದೇವ ಸಂಸ್ಥೆಯ ಶಾಖೆ ನಿರ್ಮಾಣವಾಗುತ್ತಿದ್ದು, ಉದ್ಘಾಟನೆಗೆ ಸಜ್ಜಾಗಿದೆ.

15 ಅರ್ಜಿಗಳು ಸಲ್ಲಿಕೆ

ಹೊಸ ನಿರ್ದೇಶಕರ ಹುದ್ದೆಗಾಗಿ 15 ಅರ್ಜಿಗಳು ಸಲ್ಲಿಕೆಯಾಗಿವೆ. 2021ರಲ್ಲಿ ಡಾ. ಸಿ. ಎನ್. ಮಂಜುನಾಥ್ ಅವಧಿ ಮುಕ್ತಾಯಗೊಂಡಿತ್ತು. ಆಗ ಕರ್ನಾಟಕ ಸರ್ಕಾರ ಆದೇಶವೊಂದನ್ನು ಹೊರಡಿಸಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲ್ಲಿಗೆ ಸರ್ಕಾರದ ಅಧಿಸೂಚನೆ ದಿನಾಂಕ 25/6/2021ರಲ್ಲಿ ಡಾ. ಸಿ. ಎನ್. ಮಂಜುನಾಥ್ ಇವರನ್ನು ನಿರ್ದೇಶಕರ ಹುದ್ದೆಗೆ ನೇಮಕ ಮಾಡಲಾಗಿರುವ ಅವಧಿಯು ದಿನಾಂಕ 19/7/2022ಕ್ಕೆ ಮುಕ್ತಾಯಗೊಳ್ಳುತ್ತಿದೆ ಎಂದು ಹೇಳಿತ್ತು

 

RELATED ARTICLES

Related Articles

TRENDING ARTICLES