Tuesday, December 24, 2024

INDIA ಗೆ ಕೈಕೊಟ್ಟ ಮಮತಾ ಬ್ಯಾನರ್ಜಿ: ಪಶ್ಚಿಮ ಬಂಗಾಳದಲ್ಲಿ TMC ಏಕಾಂಗಿ ಸ್ಪರ್ಧೆ!

ಕೊಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ INDIA ಮಿತ್ರಕೂಟದಿಂದ ದೂರವಿದ್ದು ಸ್ಪರ್ಧಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೊಂಡಿದ್ದಾರೆ. ಇದರೊಂದಿಗೆ ಮಿತ್ರಕೂಟ ಇಂಡಿಯಾಗೆ ಭಾರಿ ಹಿನ್ನಡೆಯಾದಂತಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ಸಿಗರು ಬಾಬರ್ ಸಂತತಿಯನ್ನು ಪ್ರೀತಿಸಿದಷ್ಟು ಅವರಪ್ಪಂದಿರನ್ನು ಪ್ರೀತಿಸಿರಲ್ಲ!: ಸಿ.ಟಿ ರವಿ

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಹಂಚಿಕೆ ಬಗ್ಗೆ ಗೊಂದಲ ಉಂಟಾಗಿದ್ದು, ಇದೀಗ ಇಂಡಿಯಾ ಮಿತ್ರಕೂಟಕ್ಕೆ ಬೆಂಬಲ ನೀಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉಲ್ಟಾ ಹೊಡೆದಿದ್ದಾರೆ.

ಕಾಂಗ್ರೆಸ್​ ನವರು 10 ರಿಂದ 12 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬೇಡಿಕೆ ಇಟ್ಟಿದ್ದರು ಈ ಬೇಡಿಕೆಗೆ ಟಿಎಂಸಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲು ಕಾಂಗ್ರೆಸ್​ಗೆ ಅವಕಾಶ ಕಲ್ಪಿಸಲು ಒಪ್ಪಿಕೊಂಡಿದ್ದರು. ಈ ವಿಚಾರದಲ್ಲಿ ಗೊಂದಲ ಉಂಟಾಗಿ ಮಮತಾ ಬ್ಯಾನರ್ಜಿ ಇದೀಗ ಏಕಾಂಗಿಯಾಗಿ ಸ್ಫರ್ಧಿಸಲು ತೀರ್ಮಾನಿಸಿದ್ದಾರೆ.

ಪಶ್ಷಿಮ ಬಂಗಾಲದ ಎಲ್ಲಾ 42 ಕ್ಷೇತ್ರಗಳಲ್ಲಿ ಟಿಎಂಸಿ ಅಭ್ಯರ್ಥಿಗಳು ಸ್ಪರ್ಧಿಸಲು ತೀರ್ಮಾನಿಸಿದ್ದಾರೆ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ. ಇದರೊಂದಿಗೆ ಭಾರತ್​ ನ್ಯಾಯ್ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಶಾಕ್ ನೀಡಿದ್ದಾರೆ.

RELATED ARTICLES

Related Articles

TRENDING ARTICLES