Monday, December 23, 2024

ಮೆಟ್ರೋ ಹಸಿರು ಮಾರ್ಗದಲ್ಲಿ 3 ದಿನಗಳು ಸಂಚಾರ ವ್ಯತ್ಯಯ!

ಬೆಂಗಳೂರು: ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ಯೋಜಿತ ಕಾಮಗಾರಿ ಆರಂಭವಾಗುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಹಸಿರು ಮಾರ್ಗದ ಪೀಣ್ಯ ಕೈಗಾರಿಕಾ ಪ್ರದೇಶ-ನಾಗಸಂದ್ರ ನಿಲ್ದಾಣಗಳ ನಡುವೆ ಜನವರಿ 26 ರಿಂದ 28 ರವರೆಗೆ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು BMRCL ತಿಳಿಸಿದೆ.

ಇದನ್ನೂ ಓದಿ: ದರ್ಶನ್​ ಜೊತೆ ‘ರಿಲೇಶನ್ ಶಿಪ್‌ಗೆ 10 ವರ್ಷ’ ಎಂದು ಪವಿತ್ರಾಗೌಡ ಪೋಸ್ಟ್: ಎಚ್ಚರಿಕೆ ನೀಡಿದ ಪತ್ನಿ!

ಈ ದಿನಗಳಲ್ಲಿ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ. ಜನವರಿ 29 ರಿಂದ ಎಂದಿನಂತೆ ಬೆಳಗ್ಗೆ 5 ಗಂಟೆಯಿಂದ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಸೇವೆಗಳು ಇರಲಿವೆ.

ತಾತ್ಕಾಲಿಕವಾಗಿ ರೈಲು ಸೇವೆ ಸ್ಥಗಿತದಿಂದ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ನಿರೀಕ್ಷೆ ಇದೆ.

RELATED ARTICLES

Related Articles

TRENDING ARTICLES