Wednesday, January 22, 2025

ದಿನ ಭವಿಷ್ಯ: ಇಂದು ಪುಷ್ಯ ಪೂರ್ಣಿಮಾ, ಈ ರಾಶಿಗೆ ಪುಣ್ಯ ಪ್ರಾಪ್ತಿ!

2024 ಜನವರಿ 25ರ ಗುರುವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

ಮೇಷ: ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರಯಾಣದ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.

ವೃಷಭ: ನಿಮ್ಮ ಹಾಸ್ಯದ ಮನೋಭಾವವು ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ.

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನ ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ.

ಇದನ್ನೂ ಓದಿ: ನಾಳೆ 75ನೇ ಗಣರಾಜ್ಯೋತ್ಸವ ಆಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಭದ್ರತೆ!

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದೀರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯವನ್ನು ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ನಿಮ್ಮ ಪೂರ್ವಯೋಜಿತ ಕಾರ್ಯಗಳನ್ನು ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗ್ರತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡವನ್ನು ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.

ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ. ಅದು ಅಪಾಯ ತಂದೀತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೆನಿಸಿದರೂ. ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.

RELATED ARTICLES

Related Articles

TRENDING ARTICLES