Wednesday, January 22, 2025

ದೇವೇಗೌಡ, ಕುಮಾರಸ್ವಾಮಿ ಮಂಡ್ಯದಲ್ಲಿ ಹುಟ್ಟಿ ಬೆಳೆದವರಲ್ಲ : ಮಾಜಿ ಸಚಿವ ನಾರಾಯಣಗೌಡ

ಬೆಂಗಳೂರು : ಸುಮಲತಾ ಅಂಬರೀಶ್ ಜೊತೆಗೆ ಮಾತನಾಡಿದ್ದೇವೆ. ಮಂಡ್ಯದಿಂದಲೇ ಸ್ಪರ್ಧೆ ಮಾಡ್ತೇನೆ ಎಂದು ಮೇಡಂ ಹೇಳಿದ್ದಾರೆ. ಬೇರೆ ಕಡೆ ಹೋಗಲ್ಲ ಎಂದು ಹೇಳಿದ್ದಾರೆ, ಖುಷಿಯಾಗಿದೆ ಎಂದು ಮಾಜಿ ಸಚಿವ ನಾರಾಯಣಗೌಡ ಹೇಳಿದರು.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಭೇಟಿ ಬಳಿಕ ಮಾಜಿ ಸಚಿವ ನಾರಾಯಣಗೌಡ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್​ಗೂ ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ದೇವೇಗೌಡರು, ಕುಮಾರಸ್ವಾಮಿ ಮಂಡ್ಯದಿಂದ ಹುಟ್ಟಿ ಬೆಳೆದವರಲ್ಲ. ರಾಮನಗರ ಅವರ ಲಕ್ಕಿ ಪ್ಲೇಸ್. ಕುಮಾರಸ್ವಾಮಿಯವರು ರಾಮನಗರದಿಂದ ಸ್ಪರ್ಧೆ ಮಾಡಲಿ. ಮಂಡ್ಯ ಜಿಲ್ಲೆಯಿಂದ ಸುಮಲತಾ ಅವರೇ ಮುಂದುವರಿದರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ವಿತ್ ಔಟ್ ಪಾರ್ಟಿ, ಸಿಂಬಲ್ ಗೆದ್ದು ಬಂದಿದ್ದೇನೆ : ಸುಮಲತಾ ಗುಡುಗು  

ಸಿಟಿಂಗ್ ಎಂಪಿಗೆ ಏಕೆ ಟಿಕೆಟ್ ಕೊಡಲ್ಲ?

ಮಂಡ್ಯ ಟಿಕೆಟ್ ವಿಚಾರವಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇವೆ. ಜಿಲ್ಲೆಯಲ್ಲಿ ಬಿಜೆಪಿ ಬೆಳೆಸಬೇಕು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲೂ ಬಿಜೆಪಿ ಗೆಲ್ಲುತ್ತದೆ. ಸುಮಲತ ಅಂಬರೀಶ್ ಕೂಡ ಮಂಡ್ಯದಿಂದ ಸ್ಪರ್ಧೆಗೆ ಪ್ರಿಪೇರ್ ಆಗಿದ್ದಾರೆ. ಸಿಟಿಂಗ್ ಎಂಪಿಗೆ ಏಕೆ ಟಿಕೆಟ್ ಕೊಡಲ್ಲ? ಎಂದು ಮಾಜಿ ಸಚಿವ ನಾರಾಯಣಗೌಡ ಪ್ರಶ್ನಿಸಿದರು.

RELATED ARTICLES

Related Articles

TRENDING ARTICLES