Monday, December 23, 2024

ಕಾಂಗ್ರೆಸ್​ನಲ್ಲಿ ಜಗದೀಶ್ ಶೆಟ್ಟರ್​ಗೆ ಅನ್ಯಾಯವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ನಲ್ಲಿ ಜಗದೀಶ್ ಶೆಟ್ಟರ್ ಗೆ ಯಾವುದೇ ಅನ್ಯಾಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಮಾಜಿ ಸಿಎಂ ಜಗದೀಶ್​​​​ ಶೆಟ್ಟರ್​​​​​ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಅವಮಾನ ಆಗಿದೆ ಎಂದು ಕಾಂಗ್ರೆಸ್​ಗೆ ಬಂದಿದ್ರು. ನಾವು ಟಿಕೆಟ್ ಕೊಟ್ಟಿದ್ದೆವು, ಅವರು ಸೋತಿದ್ದರು. ಆ ಬಳಿಕ ನಾವು ಅವರನ್ನು ಎಂಎಲ್​ಸಿ ಮಾಡಿದ್ದೆವು ಕಾಂಗ್ರೆಸ್​ನಲ್ಲಿ ಶೆಟ್ಟರ್​ಗೆ ಯಾವುದೇ ಅನ್ಯಾಯ ಆಗಿಲ್ಲ. ನನ್ನ ಬಳಿ ಅವರು ಏನನ್ನೂ ಹೇಳಿಕೊಂಡಿಲ್ಲ ಎಂದು ಹೇಳಿದ್ದರು.

ಜಗದೀಶ್‌ ಶೆಟ್ಟರ್‌ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಪುನ: ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ಬಿಜೆಪಿಯಿಂದ ಅವಮಾನಿತರಾಗಿ ಬಂದ ಜಗದೀಶ್ ಶೆಟ್ಟರಿಗೆ ಕಾಂಗ್ರೆಸ್ ಪಕ್ಷ ಘನತೆಯಿಂದ ನಡೆಸಿಕೊಂಡು ಸೂಕ್ತ ಸ್ಥಾನ ಮಾನ ನೀಡಿತು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು. ನಂತರ ನನಗೆ ಅವರು ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

 

 

RELATED ARTICLES

Related Articles

TRENDING ARTICLES