Sunday, December 22, 2024

ಸಂವಿಧಾನ ರಕ್ಷಣೆ ಎಂದರೆ ಜನರ ರಕ್ಷಣೆ: ಸಿಎಂ ಸಿದ್ದರಾಮಯ್ಯ 

ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನದ ರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕು. ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನವನ್ನು ಬಲಪಡಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾನಯ್ಯ ಹೇಳಿದ್ದಾರೆ.

ನಗರದ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು 75ನೇ ವರ್ಷದ “ಸಂವಿಧಾನ ಅಮೃತ ಮಹೋತ್ಸವ”ದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡುತಿದ್ದು, ಸಂವಿಧಾನ ತಜ್ಞರು, ವಿಚಾರವಾದಿಗಳಿಂದ ಭಾಷಣ ಕಾರ್ಯಕ್ರಮಗಳು ನಡೆಯಲಿವೆ.

ರಾಜ್ಯದ 6 ಸಾವಿರ ಗ್ರಾ.ಪಂ.ಗಳಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧಚಿತ್ರ ವಾಹನಗಳು ಬೆಂಗಳೂರಿನಲ್ಲಿ ಸಮಾವೇಶಗೊಳ್ಳಲಿವೆ. ಜನವರಿ 24 ಹಾಗೂ 25ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶವು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿವೆ.

ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ, ಜಾತ್ಯತೀತತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಒದಗಿಸುವ ವಿಧಿಗಳು, ಮೂಲಭೂತ ಹಕ್ಕುಗಳು, ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳನ್ನು ಖಾತ್ರಿಪಡಿಸುವ ವಿಷಯಗಳ ಬಗೆಗೆ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ.

ಸಮಾವೇಶದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ನಡೆದ ಅರ್ಥಪೂರ್ಣ ಚರ್ಚೆಗಳ 10 ವಾಲ್ಯೂಮ್‌ ಗಳ ಪುಸ್ತಕಗಳು ಮುದ್ರಿತವಾಗಿದ್ದು ಪುಸ್ತಕಗಳ ಬಿಡುಗಡೆಯೂ ಇರಲಿದೆ. ಸಂವಿಧಾನದ ಅಂಗೀಕಾರದ ಮುನ್ನಾದಿನ ಅಂಬೇಡ್ಕರರು ಮಾಡಿದ ಅಮೋಘ ಭಾಷಣವನ್ನೂ ಪುಸ್ತಕ ಒಳಗೊಂಡಿರುವುದರೊಂದಿಗೆ ಡಾ.ಬಾಬು ರಾಜೇಂದ್ರ ಪ್ರಸಾದ್, ರಾಜಾಜಿ ಅಂತಹವರೂ ಸೇರಿದಂತೆ ಸಂವಿಧಾನ ರಚನಾ ಸಭೆಯ ಮುತ್ಸದ್ದಿಗಳ ಮಾತುಗಳು ಪುಸ್ತಕದಲ್ಲಿರಲಿವೆ.

ಪ್ರಮುಖವಾಗಿ ಸಂವಿಧಾನ ಜಾರಿಗೆ ಬಂದ 75 ವರ್ಷಗಳಲ್ಲಿ ಸಂವಿಧಾನದ ಆಶಯ ಹಾಗೂ ಧ್ಯೇಯೋದ್ದೇಶ ಎಷ್ಟರ ಮಟ್ಟಿಗೆ ಈಡೇರಿದೆ ಎಂಬ ಅಂಶವೂ ಪ್ರಮುಖವಾಗಿ ಚರ್ಚೆಯಾಗಲಿದೆ. ಸಂವಿಧಾನವನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಹವಣಿಸುತ್ತಿದ್ದು, ಸಂವಿಧಾನಕ್ಕೆ ವಿರುದ್ಧವಾದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅಂತಹವರಿಗೆ ಸಂವಿಧಾನ ಜಾಥಾ ಉತ್ತರ ಕೊಡಲಿದೆ ಎಂದರು.

RELATED ARTICLES

Related Articles

TRENDING ARTICLES