ಬೆಂಗಳೂರು: ಭಕ್ತಿಗೋಸ್ಕರ ಶ್ರೀರಾಮ ಇರಬೇಕೇ ಹೊರತು ವೋಟಿಗೋಸ್ಕರ ಇರಬಾರದು.ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ಅನಾವಶ್ಯಕ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ಬಹಳ ಕೆಲಸ ಮಾಡಿದೆ. ಒಂದು ದೇವಸ್ಥಾನ ಮಾತ್ರ ಮುಖ್ಯ ಅಲ್ಲ, ಎಲ್ಲಾ ದೇವಸ್ಥಾನವೂ ಕೂಡ ಮುಖ್ಯ. ಧರ್ಮ ಎಲ್ಲರನ್ನೂ ಉಳಿಸುತ್ತಿದೆ. ಯಾರೋ ಒಬ್ಬರಿಂದ ಧರ್ಮ ಅಲ್ಲ. ಧರ್ಮ ಎಲ್ಲರನ್ನೂ ಒಳಗೊಳ್ಳಬೇಕು ಎಂದರು.
ಸ್ವಾರ್ಥಕ್ಕೋಸ್ಕರ ಶ್ರೀರಾಮನ ಬಳಸಬಾರದು. ಭಕ್ತಿ, ನಂಬಿಕೆ, ವಿಶ್ವಾಸದಿಂದ ಮಾಡಿದರೆ ಎಲ್ಲರೂ ಗೌರವಿಸುತ್ತಾರೆ. ಅಯೋಧ್ಯೆಗೆ ನಾವು ಹೋಗುವುದಕ್ಕೆ ಯಾರ ಪರ್ಮಿಷನ್ ಬೇಕಾಗಿಲ್ಲ. ಭವ್ಯವಾದ ರಾಮ ಮಂದಿರ ಕಟ್ಟಿದ್ದಾರೆ, ಅದನ್ನು ನೋಡಬೇಕು.
ಅಯೋಧ್ಯೆಗೆ ಹೋಗುತ್ತೇವೆ ಎಂದು ನಾವು ಹೇಳಿಕೊಳ್ಳಬೇಕಿಲ್ಲ, ತೋರಿಸಿಕೊಳ್ಳಬೇಕಿಲ್ಲ. ರಾಮ ರಾಜ್ಯ ಅಂದ್ರೆ ಏನರ್ಥ? ಹಿಂಸೆ ಸೃಷ್ಟಿ ಮಾಡುವುದು, ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕುವುದು ಯಾವ ರಾಮ ರಾಜ್ಯದ ಪರಿಕಲ್ಪನೆ ಎಂದು ಪ್ರಶ್ನಿಸಿದರು.