Wednesday, January 22, 2025

ಇನ್ಮೇಲೆ ಕಾಂಗ್ರೆಸ್​ ಪಕ್ಷದ ಕೈಚಳಕ ನಡೆಯುವುದಿಲ್ಲ: ಬಿ.ವೈ ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿದ್ದಾರೆ. ಕರ್ನಾಟಕದಲ್ಲಿ ಇನ್ಮುಂದೆ ಕಾಂಗ್ರೆಸ್ ಪಕ್ಷದ ಕೈಚಳಕ ನಡೆಯುವುದಿಲ್ಲ ಎಂಬ ಸ್ಪಷ್ಟ ಸಂದೇಶ ಇದರಿಂದ ಕೊಟ್ಟಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಗರದ ವಿಮಾನನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನ ಗೆಲ್ಲುವ ಸ್ಪಷ್ಟ ಸೂಚನೆ ಇದಾಗಿದೆ ಎಂದು ತಿಳಿಸಿದರು. ಮುಂದೆ ಯಾವಾಗ ವಿಧಾನಸಭಾ ಚುನಾವಣೆ ನಡೆದರೂ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ದಿನ ಭವಿಷ್ಯ: ಈ ರಾಶಿಯವರು ಮಾತನಾಡಿ ಅಪಾಯ ತಂದುಕೊಳ್ಳುವ ಸಾಧ್ಯತೆ ಎಚ್ಚರಿಕೆ !

ಈ ರಾಜಕೀಯ ಬೆಳವಣಿಗೆ ವಿಚಾರದಲ್ಲಿ ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಸಂತಸದಿಂದಿದ್ದಾರೆ ಎಂದೂ ಅವರು ತಿಳಿಸಿದರು. ಬಿಜೆಪಿ ಕರ್ನಾಟಕದ ಭದ್ರಕೋಟೆ ಎಂದು ಸಾಬೀತು ಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

RELATED ARTICLES

Related Articles

TRENDING ARTICLES