Sunday, December 22, 2024

75ನೇ ಗಣರಾಜ್ಯೋತ್ಸವ: ರಾಜ್ಯಪಾರ ಗೆಹ್ಲೋಟ್ ರಿಂದ ಧ್ವಜಾರೋಹಣ ನೆರವೇರಿಸಿದರು!

ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ.

ಇದನ್ನೂ ಓದಿ: ಪ್ರಹ್ಲಾದ್​ ಜೋಶಿ ಕ್ಷೇತ್ರದ ಮೇಲೆ ಶೆಟ್ಟರ್​ ಕಣ್ಣು!

ಸರ್ಕಾರವು 5 ಗ್ಯಾರೆಂಟಿಗಳನ್ನ ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲ ಐದು ಗ್ಯಾರೆಂಟಿಗಳನ್ನ ಅನುಷ್ಠಾನಗೊಳಿಸಲಾಗಿದೆ. ಶಕ್ತಿ & ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಮಾಸಿಕ ರೂ,2,000 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆ​ ನಿಯಂತ್ರಣಕ್ಕೆ ಪರಿಹಾರ ಕೈಗೊಳ್ಳಲಾಗಿದೆ. ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ. ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧನೆ, ಭಾರತ ಸಂವಿಧಾನ ಪೀಠಿಕೆ ಫೋಟೋ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಪ. ಜಾತಿಯ 69,190 ವಿದ್ಯಾರ್ಥಿಗಳಿಗೆ 133.82 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗಿದೆ. SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES