Sunday, December 22, 2024

ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಯಶಸ್ವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿದೆ ಎಂದುಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 75 ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಉಡುಪಿಯಲ್ಲಿ 2.2 ಲಕ್ಷ ಜನಕ್ಕೆ ಗೃಹಲಕ್ಷ್ಮೀ ಯೋಜನೆ ಫಲ ಸಿಕ್ಕಿದೆ.  ಇನ್ನೂ ರಾಜ್ಯದಲ್ಲಿ 100 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಬಸ್ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಗೃಹಜ್ಯೋತಿ ಗೆ 1.56 ಕೋಟಿ ಕುಟುಂಬಕ್ಕೆ ಫಲ ಸಿಗುತ್ತಿದೆ .ಅನ್ನಭಾಗ್ಯ ಯೋಜನೆಗೆ ಜಿಲ್ಲೆಯಲ್ಲಿ 6 ಲಕ್ಷ ಜನಕ್ಕೆ ಪಡಿತರ ವಿತರಿಸಲಾಗಿದೆ. ಉಡುಪಿಯಲ್ಲಿ ಯುವನಿಧಿಗೆ 1781 ಅರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದ್ದು,ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಯಶಸ್ವಿಯಾಗಿದೆ ಎಂದರು.

ಸಂವಿಧಾನ ಜಾಥಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಜಿ.ಎಸ್.ಮಮತಾ ದೇವಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

RELATED ARTICLES

Related Articles

TRENDING ARTICLES