Thursday, December 19, 2024

2024ರ ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಆರ್​ ಹರೀಶ್ ಆಯ್ಕೆ!

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಎಂ.ಆರ್.ಹರೀಶ್ ಅವರು ಅತ್ಯುತ್ತಮ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

2003ನೇ ಬ್ಯಾಚ್ ಅಧಿಕಾರಿಯಾದ ಹರೀಶ್ ಅವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ದೊಡ್ಡಬಳ್ಳಾಪುರ ವೃತ್ತದ ಸರ್ಕಲ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿದ ಬಳಿಕ ದೊಡ್ಡಬೆಳವಂಗಲ ಠಾಣೆಯ ಪೊಲೀಸ್ ಇ‌ನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಇನ್ಮೇಲೆ ಕಾಂಗ್ರೆಸ್​ ಪಕ್ಷದ ಕೈಚಳಕ ನಡೆಯುವುದಿಲ್ಲ: ಬಿ.ವೈ ವಿಜಯೇಂದ್ರ

ಇವರ ಈ ಸಾಧನೆಗೆ ದೊಡ್ಡಬಳ್ಳಾಪುರ ಪೊಲೀಸರು ಹಾಗು ದೊಡ್ಡಬೆಳವಂಗಲ ಪೊಲೀಸ್ ಸಿಬ್ಬಂದಿಗಳು ಶುಭಕೋರಿದ್ದಾರೆ.

RELATED ARTICLES

Related Articles

TRENDING ARTICLES