ಮಂಗಳೂರು: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೋಷಕರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಿತೀಶ್ ಕುಮಾರ್!
ಕಡಬ ಮೂಲದ ಶಾಕೀರ್ ಎಂಬಾತ ಬಾಲಕಿಗೆ ಕಿರುಕುಳ ನೀಡಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಯನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ.
ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಹಿಂದು ಮುಖಂಡ ಅರುಣ್ ಪುತ್ತಿಲ ಸ್ಥಳಕ್ಕೆ ಆಗಮಿಸಿ ಯುವಕರ ಗುಂಪನ್ನು ಸಮಾಧಾನಪಡಿಸಿದ್ದಾರೆ. ಪೊಲೀಸರ ಜೊತೆ ಮಾತುಕತೆ ನಡೆಸಿ, ಆರೋಪಿ ಶಾಕೀರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನ ಬಂಧಿಸಲಾಗಿದೆ.