Wednesday, January 22, 2025

ತೀವ್ರ ಎದೆನೋವು, ಬಿಜೆಪಿ ಸಂಸದ ಜಿಗಜಿಣಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರು ತೀವ್ರ ಎದೆನೋವಿನಿಂದ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ವಿಜಯಪುರದಿಂದ ಬಾಗಲಕೋಟೆಗೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಎದೆನೋವು ಶುರುವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿಯಾಗಿದೆ.

ಸದ್ಯ ವೈದ್ಯರು ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ಅವರ ಆರೋಗ್ಯದ ಕುರಿತಾಗಿ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

Related Articles

TRENDING ARTICLES