Thursday, December 26, 2024

ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ : ಸಿದ್ದರಾಮಯ್ಯ ಕ್ಷಮೆಯಾಚನೆ

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲೇ ಸಂಬೋಧಿಸಿರುವ ಬಗ್ಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಾಯ್ತಪ್ಪಿನಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ‌ ಸಂಭೋದಿಸಿದೆ ಎಂದು ಕ್ಷಮೆಯಾಚನೆ

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ನಾಯಕರು ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಅವಮಾನಿಸಿದ್ದಾರೆ. ಇದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು ಎಂದು ತಿಳಿಸಿದ್ದಾರೆ.

ಏಕವಚನದಲ್ಲಿ ಸಂಭೋದಿಸುವುದು ರೂಢಿ

ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ. ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ ಎಂದು ಹೇಳಿದ್ದಾರೆ.

ಆಗಿರುವ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ

ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು. ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES