Sunday, December 22, 2024

ಈಶ್ವರಪ್ಪ, ಸಿ.ಟಿ. ರವಿ, ಅಶೋಕ್ ಕೂಲಿ ಮಾಡಬೇಕಿತ್ತು : ಸಿದ್ದರಾಮಯ್ಯ

ಚಿತ್ರದುರ್ಗ : ಅಂಬೇಡ್ಕರ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್. ಈಶ್ವರಪ್ಪ ಸಿ.ಟಿ. ರವಿ ಮತ್ತು ಆರ್. ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ಚಿತ್ರದುರ್ಗದಲ್ಲಿ ನಡೆದ ‘ಶೋಷಿತರ ಜಾಗೃತಿ ಸಮಾವೇಶ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದರು.

ಮಂಡಲ್ ವರದಿಯನ್ನು ಬಿಜೆಪಿ-ಆರ್.ಎಸ್.ಎಸ್ ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಬಿಜೆಪಿ-ಆರ್.ಎಸ್.ಎಸ್ ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದು ಹೇಳಿದರು.

ಕನಕದಾಸರನ್ನು ಅವಮಾನಿಸಬೇಡಿ

ಸಂಘಟನೆಗಳ ಮೂಲಕ ಜಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದು ತಿಳಿಸಿದರು.

ಜಾತಿ ತಾರತಮ್ಯದಿಂದಲೇ ಶೋಷಣೆ

ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು‌. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲೂ ಶೋಷಣೆ ಮುಂದುವರಿದಿದೆ.

RELATED ARTICLES

Related Articles

TRENDING ARTICLES