Wednesday, January 22, 2025

ಕುರಿ ಕಾಯೋನು ಸಿಎಂ ಆದ ಅಂತ ನನ್ನ ವಿರೋಧಿಸುತ್ತಾರೆ : ಸಿದ್ದರಾಮಯ್ಯ

ಚಿತ್ರದುರ್ಗ : ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.

ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ‘ಶೋಷಿತರ ಜಾಗೃತಿ ಸಮಾವೇಶ’ವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ. ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ, ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಕರೆ ಕೊಟ್ಟರು.

ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ

ಅನ್ನಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ, ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ ಎಂದು ಭರವಸೆ ನೀಡಿದರು.

ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

RELATED ARTICLES

Related Articles

TRENDING ARTICLES