Wednesday, January 22, 2025

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನ ಏಕವಚನದಲ್ಲೇ ಸಂಬೋಧಿಸಿದ ಸಿದ್ದರಾಮಯ್ಯ

ಚಿತ್ರದುರ್ಗ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲೇ ಸಂಬೋಧಿಸಿ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ‘ಶೋಷಿತರ ಜಾಗೃತಿ ಸಮಾವೇಶ’ದಲ್ಲಿ ಭಾಷಣ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ, ಬಿಜೆಪಿಯನ್ನು ಟೀಕಿಸುವ ಬರದಲ್ಲಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲೇ ಕರೆದಿದ್ದಾರೆ.

‘ಇವರ ಯೋಗ್ಯತೆಗೆ ಪಾಪ ದ್ರೌಪದಿ ಮುರ್ಮು ಶೋಷಿತ ವರ್ಗಕ್ಕೆ ಸೇರಿದವ..! (ರಾಷ್ಟ್ರಪತಿಗಳ ಬಗ್ಗೆ ಏಕವಚನ) ಅವ..ನ್ನು (ಮತ್ತೆ ಏಕವಚನ) ನೂತನ (ಪಾರ್ಲಿಮೆಂಟ್) ಸಂಸತ್ ಭವನ ಉದ್ಘಾಟನೆಗೆ ಕರೆದಿಲ್ಲ. ಮೊನ್ನೆ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ದೇವಸ್ಥಾನ ಉದ್ಘಾಟನೆ ಮಾಡೋಕೆ ಕರೆಯಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನು ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆಯಿಂದ ಸಿದ್ಧರಾಮಯ್ಯರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಸಹ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES