Tuesday, November 5, 2024

ಭಾರತಕ್ಕೆ ಹ್ಯಾಟ್ರಿಕ್ ಗೆಲುವು : ಅಮೆರಿಕ ವಿರುದ್ಧ 201 ರನ್​ಗಳ ಬೃಹತ್ ಜಯ

ಬೆಂಗಳೂರು : ಅಂಡರ್​-19 ವಿಶ್ವಕಪ್​ ಟೂರ್ನಿಯ ಮೂರನೇ ಪಂದ್ಯದಲ್ಲಿ ಮತ್ತೆ ಘರ್ಜಿಸಿದ ಭಾರತ ಯಂಗ್ ಟೈಗರ್ಸ್ ಅಮೆರಿಕ ತಂಡವನ್ನು ಉಡೀಸ್ ಮಾಡಿದೆ.

ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಅಮೆರಿಕವನ್ನು ಎದುರಿಸಿದ ಭಾರತ 201 ರನ್​ಗಳ ಬೃಹತ್ ಜಯ ಸಾಧಿಸಿದೆ. ಇದರೊಂದಿಗೆ ಲೀಗ್ ಸುತ್ತಿನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಸೂಪರ್ ಸಿಕ್ಸ್ ಹಂತಕ್ಕೆ ಲಗ್ಗೆ ಇಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 326 ರನ್ ಗಳಿಸಿತ್ತು. ಅರ್ಶಿನ್ ಕುಲಕರ್ಣಿ 8 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ 108 ರನ್ ಸಿಡಿಸಿದರು. ಮುಶೀರ್ 73, ನಾಯಕ ಉದಯ್ ಸಾಹರನ್ 35, ಪ್ರಿಯಾಂಶು ಮೊಲಿಯಾ 27, ಸಚಿನ್ ದಾಸ್ 20 ರನ್ ಗಳಿಸಿದರು.

327 ರನ್​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಅಮೆರಿಕ ತಂಡ 8 ವಿಕೆಟ್ ಕಳೆದುಕೊಂಡು ಕೇವಲ 125 ರನ್​ ಗಳಿಸಲಷ್ಟೇ ಶಕ್ತವಾಯಿತು. ಅಮೆರಿಕ ಬ್ಯಾಟರ್ ಉತ್ಕರ್ಷ್ ಶ್ರೀವಾಸ್ತವ 40 ರನ್ ಗಳಿಸಿದರು. ಉಳಿದ ಯಾವ ಬ್ಯಾಟರ್ ಸಹ ಉತ್ತಮ ಪ್ರದರ್ಶನ ನೀಡಲಿಲ್ಲ. ಭಾರತದ ಪರ ನಮನ್ ತಿವಾರಿ 4 ವಿಕೆಟ್ ಪಡೆದರು. ಅರ್ಶಿನ್ ಕುಲಕರ್ಣಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಲೀಗ್​ನ ಮೊದಲ ಪಂದ್ಯದಲ್ಲಿ ಬಾಂಗ್ಲಾ ಪಡೆಯನ್ನು ಮಣಸಿದ್ದ ಭಾರತ, ಎರಡನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧವೂ 201 ರನ್​ಗಳಿಂದ ಗೆಲುವು ಸಾಧಿಸಿತ್ತು. ಇದೀಗ ಲೀಗ್​ನ ಕೊನೆಯ ಪಂದ್ಯದಲ್ಲೂ ಅಮೆರಿಕ ವಿರುದ್ಧ 201 ರನ್​ಗಳ ಬೃಹತ್ ಗೆಲುವು ದಾಖಲಿಸಿ, 3 ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದೆ.

RELATED ARTICLES

Related Articles

TRENDING ARTICLES