Monday, December 23, 2024

ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಿತೀಶ್ ಕುಮಾರ್!

ಪಾಟ್ನಾ: ಬಿಹಾರದಲ್ಲಿ ರಾಜಕೀಯ ಚಟುವಟಿಗೆಗಳು ಗರಿಗೆದರಿದ್ದು ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಆರ್‌ಜೆಡಿ-ಜೆಡಿಯು ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದೆ.

ಭಾನುವಾರ ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ.

ಇದನ್ನೂ ಓದಿ: ಮಾಜಿ ಶಾಸಕ ನಾಗನಗೌಡ ಕಂದಕೂರ ನಿಧನ! 

ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್‌, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವೀಕ್ಷಕರನ್ನ ನೇಮಕ ಮಾಡಿದೆ. ಭೂಪೇಶ್ ಬಘೇಲ್ ಅವರನ್ನು ವೀಕ್ಷಕನನ್ನಾಗಿ ನೇಮಸಿದೆ. ಮಗದೊಂದು ಕಡೆ ಜೆಡಿಯುನ 10 ಶಾಸಕರನ್ನು ಸೆಳೆಯಲು ಲಾಲೂ ಪ್ರಸಾದ್ ಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

RELATED ARTICLES

Related Articles

TRENDING ARTICLES