Wednesday, October 30, 2024

ನೆಲದ ಪಾಲಾಯ್ತು ಕ್ವಿಂಟಾಲ್​ ಗಟ್ಟಲೆ ಚಿಕನ್ ಬಿರಿಯಾನಿ!

ಚಿತ್ರದುರ್ಗ: ಜಿಲ್ಲೆಯಲ್ಲಿ ಕಾಂಗ್ರೆಸ್​ ಸರ್ಕಾರದ ವತಿಯಿಂದ ಹಮ್ಮಿಕೊಂಡಿದ್ದ ಶೋಷಿತ ಸಮುದಾಯಗಳ ಸಮಾವೇಶದಲ್ಲಿ ಕ್ವಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲಾಗಿರುವ ಘಟನೆ ಬೆಳಕಿಗೆ ಬಂದಿದೆ.

ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶಕ್ಕೆ ಬರುವ ಜನರಿಗೆ ವಿತರಿಸಲೆಂದು ಸಿದ್ಧಪಡಿಸಿದ್ದ ಬಿರಿಯಾನಿ ನೆಲದಪಾಲಾಗಿದೆ. ಸಮಾವೇಶಕ್ಕೆ ನಿರೀಕ್ಷೆಯಷ್ಟು ಜನರು ಬಾರದ ಹಿನ್ನೆಲೆಯಲ್ಲಿ ಉಳಿದ ಚಿಕನ್ ಬಿರಿಯಾನಿ ಹಾಗೂ ಪಲಾವ್ ಸಂಪೂರ್ಣವಾಗಿ ನೆಲದ ಪಾಲಾಗಿದೆ.
ಸುಮಾರು ಐದು ಲಕ್ಷ ಜನರು ಸೇರುವ ನಿರೀಕ್ಷೆಯಿಂದ ಮೂರುವರೆ ಲಕ್ಷಕ್ಕೂ ಅಧಿಕ ಜನರಿಗೆಂದು ಬಿರಿಯಾನಿ ತಯಾರಿಸಲಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಜನರು ಆಗಮಿಸದ ಹಿನ್ನಲೆ ತಯಾರಿಸಲು ತಂದಿದ್ದ ಕೆಲವು ಆಹಾರ ಸಾಮಗ್ರಿಗಳನ್ನು ಆಯೋಜಕರು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಉಳಿದ ಅನ್ನ, ಚಿಕನ್ ಎಲ್ಲವನ್ನು ನೆಲಕ್ಕೆ ಹಾಕಿದ್ದಾರೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ.

RELATED ARTICLES

Related Articles

TRENDING ARTICLES