Saturday, December 21, 2024

ರಾಷ್ಟ್ರಧ್ವಜವನ್ನು ಕಂಡರೆ ಉರಿದು ಬೀಳುತ್ತಿದೆ ಬಿಜೆಪಿ: ಪ್ರಿಯಾಂಕ್​ ಖರ್ಗೆ

ಮಂಡ್ಯ: ಕೆರಗೋಡಿನಲ್ಲಿ ಹನುಮ ಧ್ವಜವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗಲ್ಲ. ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಬೆಂಕಿ ಹಚ್ಚಿ, ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ನೆಲದ ಪಾಲಾಯ್ತು ಕ್ವಿಂಟಾಲ್​ ಗಟ್ಟಲೆ ಚಿಕನ್ ಬಿರಿಯಾನಿ!

ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ಆರ್​ಎಸ್​ಎಸ್​ ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ. ರಾಷ್ಟ್ರಧ್ವಜಕ್ಕೆ ಕೈ ಮುಗಿಯುವ ಬದಲು ಬಿಜೆಪಿ ಕೆಂಡ ಕಾರುತ್ತಿದೆ. ತಮಗೆ ತಾವೇ ದೇಶದ್ರೋಹಿಗಳೆಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ಬಿಜೆಪಿಯವರಿಗೆ ದೇಶದ ಧ್ವಜ, ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ನಿಮ್ಮ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಿ. ಬಿಜೆಪಿ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗು ಬಡಿಯುತ್ತೇವೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES