ಬೆಂಗಳೂರು: ಬಿಜೆಪಿಯವ್ರು ಹನಮ ಧ್ವಜದ ವಿಚಾರವನ್ನೇ ಇಟ್ಟುಕೊಂಡು ಜನರನ್ನು ಹತ್ತಿಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದೆ ಬಿಜೆಪಿ ತನ್ನ ಅಸ್ತಿತ್ವ ಕಂಡುಕೊಳ್ಳಲು ಹನುಮ ಧ್ವಜ ವಿಚಾರ ಇಟ್ಟುಕೊಂಡು ಜನರನ್ನು ಎತ್ತಿಕಟ್ಟಲು ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಮೂವರು ನಕಲಿ BIS ಅಧಿಕಾರಿಗಳಿಂದ 1 ಕೆಜಿ ಚಿನ್ನ ಕದಿಯಲು ಯತ್ನ: ಪೋಲಿಸರ ವಶಕ್ಕೆ!
ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಬಿಜೆಪಿಯವರು ನಡೆಸಿದ್ದಾರೆ. ದೇಶದ ಕಾನೂನಿಗೆ ನಾವು ಗೌರವ ಕೊಡಬೇಕು. ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಹಾಗಾಗಿ ಜೆಡಿಎಸ್ ಜತೆ ಸೇರಿಕೊಂಡು ರಾಜಕೀಯ ನೆಲೆ ಕಂಡುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.
ಇದರಿಂದ ಏನೂ ಲಾಭ ಆಗಲ್ಲ ಮಂಡ್ಯದ ಜನಕ್ಕೆ ಎಲ್ಲವೂ ಗೊತ್ತಿದೆ. ಮಂಡ್ಯದ ಜನ ಜಾತ್ಯಾತೀತರು ಹಾಗೂ ಸಹಿಷ್ಣುತೆ ಉಳ್ಳವರು ಇಂತಹ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.