Sunday, August 24, 2025
Google search engine
HomeUncategorizedನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಸಿಎಂ ಸಿದ್ದರಾಮಯ್ಯ

ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ.: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು.

ಇದನ್ನೂ ಓದಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.

ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments