Sunday, December 22, 2024

ರಾತ್ರೋರಾತ್ರಿ ಕಲ್ಲು ತೂರಾಟ, ಪೊಲೀಸರಿಗೂ ಗಾಯ!

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ನಾಮಫಲಕ ವಿಚಾರದಲ್ಲಿ ಎರಡು ಗುಂಪುಗಳ (ಎರಡು ಕೋಮುಗಳು) ನಡುವೆ ರಾತ್ರೋರಾತ್ರಿ ಘರ್ಷಣೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಇಡೀ ಗ್ರಾಮವೇ ಉದ್ವಿಗ್ನಗೊಂಡಿದೆ.

ಘರ್ಷಣೆ ವೇಳೆ ಎರಡು ಗುಂಪಿನವರು ಮನೆಗಳ ಮೇಲೆ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ ಆಗಿವೆ. ಸರ್ವಾಜನಿಕರು ಹಾಗೂ ಸ್ಥಳಕ್ಕೆ ಬಂದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಗ್ರಾಮವು ಬೂದಿ ಮುಚ್ಚಿದ ಕೆಂಡದಂತಿದೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES