ರಾಯಚೂರು : ಕಲಿಯುಗ ಕಾಮಧೇನು ಕಲ್ಪವೃಕ್ಷ ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಲ್ಲಿ ಭಕ್ತರಿಂದ ಭಾರಿ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ಜನವರಿ ತಿಂಗಳ ಕಾಣಿಕೆ ಹುಂಡಿ ಎಣಿಕೆಕಾರ್ಯ ಮುಕ್ತಾಯಗೊಂಡಿದೆ. ಒಟ್ಟು 4 ಕೋಟಿ 15 ಲಕ್ಷ 32,738 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 4 ಕೋಟಿ 7 ಲಕ್ಷ 11,838 ರೂಪಾಯಿ ಕರೆನ್ಸಿ ನೋಟುಗಳು ಹಾಗೂ 8 ಲಕ್ಷ 20,900 ರೂಪಾಯಿ ನಾಣ್ಯಗಳಿವೆ. ಜೊತೆಗೆ 44 ಗ್ರಾಂ ಚಿನ್ನ ಹಾಗೂ 3642 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.
ಕಾಣಿಕೆ ಹುಂಡಿ ಎಣಿಕೆ ಕಾರ್ಯದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು, ಗುರುಪಾದ ಕರಸೇವಕರು, ನೂರಾರು ಜನ ಸಿಬ್ಬಂದಿ ಹಾಗೂ ಭಕ್ತರು ಪಾಲ್ಗೊಂಡಿದ್ದರು.