Monday, December 23, 2024

ಕಾಂಗ್ರೆಸ್​ ವಿರುದ್ಧ ಮತ ಹಾಕಿದರೆ ಐದೂ ಗ್ಯಾರಂಟಿ ಕ್ಯಾನ್ಸಲ್ : ಶಾಸಕ ಹೆಚ್.ಸಿ. ಬಾಲಕೃಷ್ಣ

ಮಾಗಡಿ : ರಾಮಮಂದಿರದ ಅಕ್ಷತೆ ಕಾಳಿಗೆ ಆಸೆಪಟ್ಟು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ಐದೂ ಉಚಿತ ಗ್ಯಾರಂಟಿ ಕ್ಯಾನ್ಸಲ್ ಮಾಡುತ್ತೇವೆ ಎಂದು ಮಾಗಡಿ ಕಾಂಗ್ರೆಸ್​ ಶಾಸಕ ಹೆಚ್.ಸಿ. ಬಾಲಕೃಷ್ಣ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ನಮ್ಮ ಸರ್ಕಾರ ಶೇ.90ರಷ್ಟು ಅನುಕೂಲ ಮಾಡಿಕೊಟ್ಟಿದೆ. ಯುವಕರಿಗೂ ಧನ ಸಹಾಯ ನೀಡುತ್ತಿದ್ದೇವೆ. ಇದರ ಹೊರತಾಗಿಯೂ ಕಾಂಗ್ರೆಸ್​ ವಿರುದ್ಧ ಮತ ಹಾಕಿದರೆ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿಗಳನ್ನು ರದ್ದುಪಡಿಸುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನ ನೀಡಿ ಮತ ಕೇಳುತ್ತಿದ್ದೀವಿ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟ ಇಲ್ಲ ಅಂತ ಅರ್ಥ. ಹಾಗಾಗಿ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ. ನಿಮ್ಮ ಮತ ಅಕ್ಷತೆ ಕಾಳಿಗಾ..? ಐದು ಗ್ಯಾರಂಟಿಗಾ..? ಯೋಚನೆ ಮಾಡಿ.. ಎಂದು ತಿಳಿಸಿದ್ದಾರೆ.

ಡಿ.ಕೆ. ಸುರೇಶ್ ಪರ ಮತ ನೀಡುವಂತೆ ತಾಕೀತು

ಇದೇ ವೇಳೆ ಸಂಸದ ಡಿ.ಕೆ. ಸುರೇಶ್ ಪರ ಮತ ನೀಡುವಂತೆ ತಾಕೀತು ಮಾಡಿದರು. ಅಲ್ಲದೆ, ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದ್ರೆ ಗ್ಯಾರಂಟಿ ಯೋಜನೆ ಮುಂದುವರಿಸುತ್ತೇವೆ. ಗೆಲ್ಲಿಸದೇ ಇದ್ರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಅಂತ ಅಲ್ವಾ..? ಎಂದು ಮತದಾರರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ.

RELATED ARTICLES

Related Articles

TRENDING ARTICLES