Monday, December 23, 2024

ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ; ಇಮಾಮ್‌ ವಿರುದ್ಧ ಫತ್ವಾ!

ಅಯೋಧ್ಯ : ಜನವರಿ 22ರಂದು ರಾಮಮಂದಿರದಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನ ವಿರುದ್ಧ ಫತ್ವಾ ಹೊರಡಿಸಲಾಗಿದೆ ಎಂದು ಆಲ್ ಇಂಡಿಯಾ ಇಮಾಮ್ ಸಂಘಟನೆಯ ಮುಖ್ಯ ಇಮಾಮ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಕಾರ್ಯಕ್ರಮ ನಡೆದ ದಿನದಿಂದ ಕೆಲವರಿಂದ ನಿಂದನೆ ಮತ್ತು ಫೋನ್ ಕರೆಗಳಲ್ಲಿ ಬೆದರಿಕೆ ಎದುರಿಸುತ್ತಿದ್ದೇನೆ ಎಂದು ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ವಿಡಿಯೊದಲ್ಲಿ ಹೇಳಿದ್ದಾರೆ. ಇಲ್ಯಾಸಿ ಅವರು ತನ್ನ ವಿರುದ್ಧ ‘ಫತ್ವಾ’ ಹೊರಡಿಸಿರುವುದನ್ನು ಖಚಿತಪಡಿಸಿದ್ದು, “ಮುಖ್ಯ ಇಮಾಮ್ ಆಗಿ, ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನ ಆಲೋಚಿಸಿ ನಂತರ ದೇಶಕ್ಕಾಗಿ ಸೌಹಾರ್ದತೆಗಾಗಿ ಅಯೋಧ್ಯೆಗೆ ಹೋಗಲು ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಗಿನ್ನಿಸ್ ದಾಖಲೆ: 1ಲಕ್ಷ ಪ್ಲಾಸ್ಟಿಕ್‌ ಬಾಟೆಲ್‌ ಬಳಸಿ ತುಮಕೂರು ಕಲಾಕೃತಿ

“ನಿನ್ನೆ ಫತ್ವಾ ಹೊರಡಿಸಲಾಗಿದೆ, ಆದರೆ ಜನವರಿ 22 ರ ಸಂಜೆಯಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಪ್ರೀತಿಸುವವರು, ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ.

ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ಥಾನಕ್ಕೆ ಹೋಗಬೇಕು. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ, ಅವರು ಏನು ಬೇಕಾದರೂ ಮಾಡಬಹುದು”ಎಂದು ಇಲ್ಯಾಸಿ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ವಿವಿಧ ಸಮುದಾಯಗಳು ಮತ್ತು ವಿವಿಧ ಕ್ಷೇತ್ರಗಳ 7,000 ಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಭಾಗವಹಿಸಿದ್ದರು.

 

RELATED ARTICLES

Related Articles

TRENDING ARTICLES