Tuesday, December 3, 2024

ಮಯಾಂಕ್ ಅಗರ್ವಾಲ್ ಅಸ್ವಸ್ಥ : ಐಸಿಯುನಲ್ಲಿ ಚಿಕಿತ್ಸೆ, ವಿಷಪ್ರಾಶನ ಶಂಕೆ

ಬೆಂಗಳೂರು : ಭಾರತ ಕ್ರಿಕೆಟ್‌ ತಂಡದ ಆಟಗಾರ ಹಾಗೂ ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್​ ಅವರಿಗೆ ವಿಮಾನದಲ್ಲಿ ವಿಷಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿದೆ.

ಮಯಾಂಕ್‌ ಅಗರ್ವಾಲ್‌ ವಿಮಾನದಲ್ಲಿ ನೀರು ಕುಡಿದ ಬೆನ್ನಲ್ಲಿಯೇ ಅವರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತ್ರಿಪುರಾದ ಅಗರ್ತಲದಿಂದ ಸೂರತ್​ಗೆ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಸೀಟಿನ ಮುಂಭಾಗದಲ್ಲಿ ಇರಿಸಲಾಗಿದ್ದ ನೀರನ್ನು ಮಾಯಾಂಕ್ ಕುಡಿದಿದ್ದರು. ನೀರು ಕುಡಿಯುತ್ತಿದ್ದಂತೆಯೇ ನಾಲಗೆ, ಬಾಯಿ, ಕೆನ್ನೆ ಸುಟ್ಟು ಹೋದ ಅನುಭವ ಆಗಿದೆ. ಮಾತನಾಡಲು ಸಾಧ್ಯವಾಗದೆ ಮಯಾಂಕ್ ಬಿದ್ದಿದ್ದಾರೆ.

ಕೂಡಲೇ ಅವರನ್ನು ಅಗರ್ತಲದ ಐಎಲ್​ಎಸ್​ ಆಸ್ಪತ್ರೆಗೆ ರವಾನಿಸಲಾಗಿದೆ. ಮಯಾಂಕ್‌ ಅಗರ್ವಾಲ್‌ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಮಾನದ ಸಿಬ್ಬಂದಿ ನೀರಿನ ಬಾಟಲ್‌ ವಶಕ್ಕೆ ಪಡೆದುಕೊಂಡು, ತನಿಖೆ ಆರಂಭಿಸಿದ್ದಾರೆ. ಮೂಲಗಳ ಪ್ರಕಾರ ಕುಡಿಯುವ ನೀರಿನಲ್ಲಿ ಆಸಿಡ್‌ ಮಿಶ್ರ ಮಾಡಿರುವ ಶಂಕೆ ವ್ಯಕ್ತವಾಗಿದೆ.

RELATED ARTICLES

Related Articles

TRENDING ARTICLES