Saturday, May 4, 2024

ಮೈಸೂರಿನ ಅಂಬೇಡ್ಕರ್ ಪಾರ್ಕ್​ನಲ್ಲಿ ಟಿಪ್ಪು ಬಾವುಟ ಹಾರಾಟ

ಮೈಸೂರು : ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಸಿರು ಬಾವುಟ ಹಾರಾಟ ಪ್ರಕರಣ ಮಾಸುವ ಬೆನ್ನಲ್ಲೇ ಮೈಸೂರಿನಲ್ಲಿ ಟಿಪ್ಪು ಬಾವುಟ ಹಾರಿಸಲಾಗಿದೆ.

ಮೈಸೂರಿನ ಕೈಲಾಸಪುರಂನ ಮೊಟ್ಟೆಕೇರಿ ಶ್ರೀನಿವಾಸ ಟೆಂಪಲ್ ರಸ್ತೆಯಲ್ಲಿರುವ ಅಂಬೇಡ್ಕರ್ ಪಾರ್ಕ್​ನಲ್ಲಿ ಟಿಪ್ಪು ಬಾವುಟ ಹಾಕಲಾಗಿದೆ.

ಈ ಬಗ್ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಟ್ವೀಟ್​ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನ ಕೈಲಾಸಪುರಂನ ಮೊಟ್ಟೆಕೇರಿ ಶ್ರೀನಿವಾಸ ಟೆಂಪಲ್ ರೋಡ್ ನಲ್ಲಿರುವ ಅಂಬೇಡ್ಕರ್ ಪಾರ್ಕ್ ನಲ್ಲಿ ಟಿಪ್ಪು ಬಾವುಟ ಹಾಕಿದ್ದಾರೆ. ಅವರು ಯಾರ ಅನುಮತಿ ಪಡೆದಿದ್ದಾರೆ..? ಸಿಎಂ ಸಿದ್ದರಾಮಯ್ಯನವರೇ, ಪರಮೇಶ್ವರರೇ? ಉತ್ತರಿಸಿ ಎಂದು ಪ್ರಶ್ನೆ ಮಾಡಿದ್ದಾರೆ.

ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಸಿರು ಬಾವುಟ ಹಾರಾಟದ ವಿಡಿಯೋ ಟ್ವೀಟರ್​ನಲ್ಲಿ ಹರಿದಾಡುತ್ತಿದ್ದಂತೆಯೇ ಹಿಂದೂ ಸಂಘಟನೆ ವಿರೋಧ ವ್ಯಕ್ತಪಡಿಸಿತ್ತು. ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಾರುತ್ತಿರುವ ಈ ಧ್ವಜ ಯಾವ ಧರ್ಮದ್ದು..? ಕಾಂಗ್ರೆಸ್​ ನಾಯಕರು ಉತ್ತರ ಕೊಡಬೇಕು. ಗಂಡಸರೇ ಆಗಿದ್ರೆ ಈ ಧ್ವಜ ತೆಗೆಸ್ರಿ ಎಂದು ನೆಟ್ಟಿಗರು ಕಮೆಂಟ್ ಹರಿಬಿಟ್ಟಿದ್ದರು.

ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಸ್ಥಳಕ್ಕೆ ತೆರಳಿ ಹಸಿರು ಬಾವುಟವನ್ನು ತೆರವುಗೊಳಿಸಿದ್ದಾರೆ. ಸ್ಥಳದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿದ್ದಾರೆ. ಇದೀಗ ಮೈಸೂರಿನಲ್ಲಿ ಟಿಪ್ಪು ಬಾವುಟ ಹಾಕಲಾಗಿದೆ.

RELATED ARTICLES

Related Articles

TRENDING ARTICLES