Monday, December 23, 2024

ಎರಡು ಗ್ರಾಮಗಳ ನಡುವೆ ದೊಣ್ಣೆಗಳಿಂದ ಬೀದಿಯಲ್ಲಿ ಮಾರಾಮಾರಿ ಹೊಡೆದಾಟ!

ದೇವನಹಳ್ಳಿ: ಹಣಕಾಸಿನ ವಿಚಾರಕ್ಕಾಗಿ ಎರಡು ಗ್ರಾಮಗಳ ಯುವಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ತಾಲ್ಲೂಕಿನ ಹರಳೂರು ಗೇಟ್​ ಬಳಿ ಸಂಭವಿಸಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ದೇವನಹಳ್ಳಿ ಯುವಕರ ಗುಂಪು ಮತ್ತು ತಾಲೂಕಿನ ಚನ್ನಹಳ್ಳಿ ಗ್ರಾಮದವರ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಐವರಿಗೆ ಗಂಭೀರ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಣದ ವಿಚಾರಕ್ಕಾಗಿ ಎರಡು ಗುಂಫುಗಳ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದ್ದು, ಈ ಘಟನೆ ಸಂಬಂಧ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES