Monday, December 30, 2024

ST ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ!

ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯಸಿ/ 3 ವರ್ಷದ ದಿಪ್ಲೊಮಾ-20000, ಪದವಿ-25000,ಸ್ನಾತಕೋತ್ತರ ಪದವಿ ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಸಿಎ, ಎಂಎಫ್ಎ-30000 ಹಾಗೂ ಅಗ್ರಿಕಲ್ಚರ್,ಮೆಡಿಸಿನ್,ಇಂಜನಿಯರಿಂಗ್ ಯು ವಿದ್ಯಾರ್ಥಿಗಳಿಗೆ-35000 ರೂ ಪ್ರೋತ್ಸಾಹ ಧನ ನೀಡಲಾಗುತ್ತದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಸಲ್ಲಿಸಬೇಕಾಗುವ ದಾಖಲೆಗಳು ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರಗಳು/ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ಮತ್ತು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರ, ಇತ್ತಿಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹೊಂದಿರಬೇಕು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್ಸೈಟ್ www.twd.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಲು ಫೆಬ್ರವರಿ 15 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಪಿ.ಯು.ಸಿ/ಪದವಿ/ಸ್ವಾತಕೋತ್ತರ ಪದವಿ ವಿದ್ಯಾರ್ಥಿಗಳು ನಿಗಧಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಮತ್ತು ಸಲ್ಲಿಸಿದ ಅರ್ಜಿಯನ್ನು ಕಡ್ಡಾಯವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಛೇರಿಗೆ ಪಿಯುಸಿ ಹಾಗೂ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೃಡೀಕೃತ ದಾಖಲಾತಿಗಳನ್ನು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787448 ಅನ್ನು ಸಂಪರ್ಕಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES