ಮಂಡ್ಯ: ಬಿಜೆಪಿಯವರ ಜೊತೆ ಸೇರಿಕೊಂಡಿರುವ ಜೆಡಿಎಸ್ ಮಂಡ್ಯ ನೆಲದಲ್ಲಿ ಕೋಮು ಬೀಜ ಬಿತ್ತನೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯವನ್ನು ಮಂಗಳೂರನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರೆ ನೋವಾಗುತ್ತಿರಲಿಲ್ಲ. ತಮ್ಮ ವೈಯಕ್ತಿಕ ಹಿತಾಸಕ್ತಿ, ಪ್ರಾದೇಶಿಕ ಪಕ್ಷದ ಉಳಿವಿಗೆ ನಡೆಸಿದ ಹೋರಾಟಕ್ಕೆ ತಿಲಾಂಜಲಿ ಹಾಡಿರುವುದು ತೀವ್ರ ನೋವುಂಟು ಮಾಡಿದೆ ಎಂದರು.
ಇದನ್ನೂ ಓದಿ: Union Budget 2024: ಲೋಕ ಸಮರದ ಹೊಸ್ತಿಲಲ್ಲಿ ರಾಜ್ಯಕ್ಕೆ ಸಿಗುವುದೇ ಭರಪೂರ ಕೊಡುಗೆ?
ಕೆರಗೋಡು ಹನುಮಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ನಡೆದ ಪಾದಯಾತ್ರೆ ಸಮಯದಲ್ಲಿ ನಡೆದ ಅಹಿತಕರ ಘಟನೆಗಳಿಗೆ ಜೆಡಿಎಸ್ ಕಾರಣ. ಪಾದಯಾತ್ರೆ ಸಂಪೂರ್ಣವಾಗಿ ರಾಜಕೀಯ ಪ್ರೇರಿತ. ಕೆರಗೋಡು ಜನರಿಗೂ ಯಾತ್ರೆಗೂ ಯಾವುದೇ ಸಂಬಂಧವಿಲ್ಲ. ಅಲ್ಲಿನ ಜನ ಇಂತಹ ಪ್ರಚೋದನೆಗೆ ಒಳಗಾಗುವವರೂ ಅಲ್ಲ, ಹೊರಗಿನಿಂದ ಜನರನ್ನು ಕರೆತಂದು ಬೇಕೆಂದೇ ಗಲಾಟೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.