Saturday, May 18, 2024

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು.

ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು ಎಂದರು.

ಇದನ್ನೂ ಓದಿ: ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು: ಸಿಎಂ ಪ್ರತಿಕ್ರಿಯೆ!

ಕೇಂದ್ರ ಬಜೆಟ್ ಮಂಡನೆ ನಂತರ ಪ್ರತಿಕ್ರಿಯೆ:
ಕೇಂದ್ರ ಸರ್ಕಾರ ಫೆಬ್ರವರಿ 1 ರಂದು 2024–25 ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸಲಿದ್ದು, ಈ ಬಗ್ಗೆ ಪ್ರತಿಕ್ರಿಯೆ ನಾಳೆ ನೀಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಅವರ ಕಾರ್ಯಚಟುವಟಿಕೆಗಳನ್ನು ಪರಿಶೀಲನೆಯನ್ನು ನಡೆಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಈ ಅಧಿಕಾರಗಳ ಸಲಹೆ ಸೂಚನೆ, ಕಾರ್ಯವೈಖರಿಗಳ ಬಗ್ಗೆ ವಿವರ ಪಡೆಯಲಾಗಿದೆ ಎಂದರು.

RELATED ARTICLES

Related Articles

TRENDING ARTICLES