ಬೆಂಗಳೂರು : ಉತ್ತರ ಪ್ರದೇಶದ ವಿವಾದಾತ್ಮಕ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜಿಸಲು ಅನುಮತಿಸಿ ವಾರಣಾಸಿಯ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ.
ಮಸೀದಿಯ ಮುಚ್ಚಿದ 10 ಸೆಲ್ಲಾರ್ಗಳಲ್ಲಿ ಪೂಜೆ ಮಾಡಬಹುದು ಎಂದು ನ್ಯಾಯಾಲಯ ಹೇಳಿದೆ. 7 ದಿನಗಳಲ್ಲಿ ಪೂಜೆಗೆ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಸದ್ಯ ಈ ಆದೇಶದಿಂದ ಹಿಂದೂಗಳಿಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾತನಾಡಿದ್ದು, ಏಳು ದಿನಗಳಲ್ಲಿ ಶಿವನ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ಜಿಲ್ಲಾಡಳಿತ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.
ಸರ್ವೆ ವರದಿ ಬಹಿರಂಗವಾದ ಬೆನ್ನಲ್ಲೇ ಹಿಂದೂಗಳಿಗೆ ಜ್ಞಾನವಾಪಿ ಮಸೀದಿಯ ಒಳಗಡೆ ಸಿಕ್ಕ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ ಸಿಕ್ಕಿದೆ.