Wednesday, January 22, 2025

Namma Metro: ಇನ್ಮುಂದೆ ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದ್ರೆ ಬೀಳುತ್ತೆ ದಂಡ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಘಟನೆಗಳಿಗೆ ಬ್ರೇಕ್‌ ಹಾಕುವಂತೆ ಬಿಎಂಆರ್‌ಸಿಎಲ್‌ ಮೇಲೆ ಒತ್ತಡ ಹೆಚ್ಚುತ್ತಲೇ ಇದೆ. ಹೀಗಾಗಿ ನಮ್ಮ ಮೆಟ್ರೋ ಸಂಸ್ಥೆಯು ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಈಗಾಗಲೇ ನಮ್ಮ ಮೆಟ್ರೋದಲ್ಲಿ ಹಲವು ನಿಮಯಗಳಿದ್ದು, ಅದನ್ನು ಮೀರಿದವರಿಗೆ ದಂಡ ಕೂಡ ವಿಧಿಸಲಾಗುತ್ತಿದೆ. ಇನ್ನು ದಂಡದ ದರವನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಹಾಕಲಾಗಿದೆ. ಈ ಪಟ್ಟಿಯಲ್ಲಿ ಒಂದು ನಿಯಮದ ದಂಡದ ದರ ಬದಲಾಗುತ್ತಿದ್ದು, ಒಂದಲ್ಲ, ಎರಡಲ್ಲ ಬರೋಬ್ಬರಿ 20ಪಟ್ಟು ಹೆಚ್ಚಿಸಲಾಗಿದೆ.

ಒಮ್ಮೆ ಭೇಟಿ ನೀಡಿ ಮಹಿಳಾ ಪ್ರಯಾಣಿಕರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಬ್ರೇಕ್‌ ಹಾಕಲು ನಮ್ಮ ಮೆಟ್ರೋ ಈ ದಂಡದ ಮೊತ್ತವನ್ನು ಹೆಚ್ಚಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಮ್ಮ ಮೆಟ್ರೋ ಅಸಭ್ಯ ವರ್ತನೆಗೆ ವಿಧಿಸುತ್ತಿದ್ದ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಈ ಮೊದಲು 500 ರೂಪಾಯಿ ಇದ್ದ ದಂಡವನ್ನು 10,000 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ವರದಿಯಾಗಿದೆ. ನಮ್ಮ ಮೆಟ್ರೋದಲ್ಲಿ ಕಿರುಕುಳ ನೀಡುವ ಕಾಮುಕರಿಗೆ ಇನ್ನುಮುಂದೆ ಬರೋಬ್ಬರಿ 10,000 ರೂಪಾಯಿ ದಂಡ ಬೀಳಲಿದೆ.

ಅಸಭ್ಯ ಘಟನೆಗೆ ಬ್ರೇಕ್‌ ಹಾಕಲು ನಮ್ಮ ಮೆಟ್ರೋ ಸಂಸ್ಥೆ ಮಹತ್ವ ನಿರ್ಧಾರ ತೆಗೆದುಕೊಂಡು ದಂಡ ಪರಿಷ್ಕರಣೆ ಮಾಡಿದೆ.

RELATED ARTICLES

Related Articles

TRENDING ARTICLES