Thursday, January 23, 2025

ಧೋನಿಯಂತೆ ಹೆಲಿಕಾಪ್ಟರ್ ಸಿಕ್ಸರ್ ಸಿಡಿಸಿದ ಮುಶೀರ್ ಖಾನ್ : ಇಲ್ಲಿದೆ ವಿಡಿಯೋ

ಬೆಂಗಳೂರು : ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಲಿಕಾಪ್ಟರ್ ಶಾಟ್​ ಮೂಲಕ ಕ್ರಿಕೆಟ್​ ಅಂಗಳದಲ್ಲಿ ಸಂಚಲನ ಸೃಷ್ಟಿಸಿದ್ದರು. ಈ ಅತ್ಯಾಕರ್ಷಕ ಬ್ಯಾಟಿಂಗ್ ಶೈಲಿಯನ್ನು ಆ ಬಳಿಕ ಅನೇಕರು ಅನುಕರಿಸಿದ್ದರು.

ಇದೀಗ ಭಾರತ ಅಂಡರ್-19 ತಂಡದ ಆಟಗಾರ ಮುಶೀರ್ ಖಾನ್ ಕೂಡ ಹೆಲಿಕಾಪ್ಟರ್ ಶಾಟ್ ಮೂಲಕ ಗಮನ ಸೆಳೆದಿದ್ದಾರೆ.

ಅಂಡರ್​-19 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೂಪರ್ ಸಿಕ್ಸ್ ಪಂದ್ಯದಲ್ಲಿ ಮುಶೀರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಪಂದ್ಯದ 45ನೇ ಓವರ್​ನ ಮೊದಲ ಎಸೆತದಲ್ಲಿ ಡೀಪ್ ಮಿಡ್​ ವಿಕೆಟ್​ನತ್ತ ಬಾರಿಸಿದ ಸಿಕ್ಸ್​ ನೋಡಿ ಎಲ್ಲರೂ ಹುಬ್ಬೇರಿಸಿದ್ದರು.

ಕ್ಲಾರ್ಕ್​ ಎಸೆದ ಅತೀ ವೇಗದ ಎಸೆತಕ್ಕೆ ಮುಶೀರ್ ಖಾನ್, ಹೆಲಿಕಾಪ್ಟರ್ ಶಾಟ್ ಮೂಲಕ ಉತ್ತರ ನೀಡಿದ್ದರು. ಈ ಭರ್ಜರಿ ಸಿಕ್ಸರ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

4 ಪಂದ್ಯ, 2 ಶತಕ, 325 ರನ್

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಮುಶೀರ್ ಖಾನ್ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ 103.17 ಸ್ಟ್ರೈಕ್‌ರೇಟ್‌ನಲ್ಲಿ 325 ರನ್ ಗಳಿಸಿದ್ದಾರೆ. ಇದರಲ್ಲಿ 2 ಭರ್ಜರಿ ಶತಕ ಸೇರಿವೆ. ಈ ಬಾರಿಯ ಅಂಡರ್-19 ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಸದ್ಯ ಮುಶೀರ್ ಖಾನ್ ಮೊದಲ ಸ್ಥಾನದಲ್ಲಿದ್ದಾರೆ.

RELATED ARTICLES

Related Articles

TRENDING ARTICLES