Tuesday, May 14, 2024

‘2047ರ ಹೊತ್ತಿಗೆ ವಿಕಸಿತ ಭಾರತ’ ಖಾತ್ರಿಪಡಿಸಿದ ಬಜೆಟ್‌: ಪ್ರಧಾನಿ ಮೋದಿ 

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್‌ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಮೋದಿ, ‘ಮಧ್ಯಂತರ ಬಜೆಟ್ ವಿನೂತನ ಮತ್ತು ಎಲ್ಲವನ್ನೂ ಒಳಗೊಳ್ಳುವಂತಿದೆ. ನಿರಂತರತೆಯ ಭರವಸೆ ಮೂಡಿಸಿದೆ. ವಿಕಸಿತ ಭಾರತದ ನಾಲ್ಕು ಆಧಾರ ಸ್ಥಂಭಗಳಾದ ಯುವ ಜನರು, ಬಡವರು, ಮಹಿಳೆಯರು ಮತ್ತು ರೈತರನ್ನು ಈ ಬಜೆಟ್ ಸಬಲೀಕರಣಗೊಳಿಸಲಿದೆ.

2047ರ ಹೊತ್ತಿಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವ ಖಾತ್ರಿ ನೀಡಿದೆ’ ಎಂದಿದ್ದಾರೆ. ‘ಬಡವರು ಮತ್ತು ಮಧ್ಯಮ ವರ್ಗದ ಜನರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗಾಗಿ ಅವಕಾಶಗಳನ್ನು ಸೃಷ್ಟಿಸುವುದಕ್ಕೆ ಒತ್ತು ನೀಡಲಾಗಿದೆ ಎಂದರು.

RELATED ARTICLES

Related Articles

TRENDING ARTICLES